Wednesday, June 08, 2016

2016 ರ ವಿಭಾ ಸಾಹಿತ್ಯ ಪ್ರಶಸ್ತಿಗೆ ಹಸ್ತಪ್ರತಿ ಆಹ್ವಾನ




ಕನ್ನಡ ಕವಯಿತ್ರಿ ವಿಭಾ ಅವರ ನೆನಪಿನಲ್ಲಿ ’ವಿಭಾ ಸಾಹಿತ್ಯ ಪ್ರಶಸ್ತಿ-೨೦೧೬’ ಕ್ಕಾಗಿ ಕನ್ನಡದ ಕವಿಗಳಿಂದ ಮೂವತ್ತಕ್ಕೂ ಹೆಚ್ಚು ಸ್ವರಚಿತ ಕವಿತೆಗಳ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ. ಅನುವಾದಿತ ಕವಿತೆಗಳು ಬೇಡ. ಈ ಪ್ರಶಸ್ತಿಯು ರೂ.೫೦೦೦/-  ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಪ್ರಶಸ್ತಿ ವಿಜೇತ ಹಸ್ತಪ್ರತಿಯನ್ನು ಗದಗದ ಲಡಾಯಿ ಪ್ರಕಾಶನದಿಂದ ಪ್ರಕಟಿಸಲಾಗುವುದು. ಹಸ್ತಪ್ರತಿ ಕಳುಹಿಸಲು ಕೊನೆಯ ದಿನಾಂಕ; ಜುಲೈ ೩೦.

ವಿ.ಸೂ; ಯಾವುದೇ ಕಾರಣಕ್ಕೂ ಹಸ್ತಪ್ರತಿಯನ್ನು ಹಿಂದಿರುಗಿಸಲಾಗುವುದಿಲ್ಲ.
ಹಸ್ತಪ್ರತಿಯನ್ನು ಕಳುಹಿಸಬೇಕಾದ ವಿಳಾಸ; ಪ್ರಕಾಶ ಮತ್ತು ಸುನಂದಾ ಕಡಮೆ, ಸಂಚಾಲಕರು, ವಿಭಾ ಸಾಹಿತ್ಯ ಪ್ರಶಸ್ತಿ-೨೦೧೬, ನಂ. ೯೦, ’ನಾಗಸುಧೆ’ ಮಹಡಿ, ೬/ಬಿ ಕ್ರಾಸ್, ಕಾಳಿದಾಸನಗರ, ವಿದ್ಯಾನಗರ ವಿಸ್ತೀರ್ಣ, ಹುಬ್ಬಳ್ಳಿ- ೫೮೦೦೩೧, ದೂರವಾಣಿ; ೯೪೮೩೯೭೧೦೨೬, ೯೮೪೫೭೭೯೩೮೭.

No comments:

Post a Comment

ಮೇ 6,7 ಧಾರವಾಡ : 4ನೇ ಮೇ ಸಾಹಿತ್ಯ ಮೇಳ

ಇದು 2017 ರ ಮೇ ಸಾಹಿತ್ಯ ಮೇಳ.. ಎಲ್ಲ ಕಾಲದಲ್ಲೂ ವಿರೋಧ ಪಕ್ಷವಾಗಿಯೇ ಕಾಣುವ ಸಾಹಿತಿಗಳು ಕಲಾವಿದರು ಈ ಕಾಲದಲ್ಲಿ ಫ್ಯಾಸಿಸಂ ವಿರುದ್ಧ ಜನಪರ ಸಂಘಟನೆಗಳ ಜೊತೆ ಸೇರಿ ನ...